ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಜಿಲ್ಲೆ ಪೊಲೀಸ್ ಆಯುಕ್ತರಾಗಿದ್ದ ಆರ್.ದಿಲೀಪ್ ಅವರನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದ್ದು, ಐಪಿಎಸ್ ಅಧಿಕಾರಿ ಲಾಬೂರಾಂ ಅವರನ್ನು ಪೊಲೀಸ್ ಕಮೀಷನರ್ ಹುದ್ದೆಗೆ ವರ್ಗಾವಣೆ ಮಾಡಿದ್ದಾರೆ.
ಡಿಸಿಪಿ ಪಿ.ಕೃಷ್ಣಕಾಂತ್ ಅವರನ್ನ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಸ್ಥಳ ತಿಳಿಸದೆ ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹೊಂದಾಣಿಕೆಯ ಕೊರತೆಯಿಂದ ರಾಜಕಾರಣಿಗಳು ಕೂಡಾ ಬೇಸರವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ಎಚ್ಚರಿಕೆ ನೀಡಿದ್ದರು.
Kshetra Samachara
20/10/2020 08:31 pm