ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಆರ್.ದಿಲೀಪ್ ಹಾಗೂ ಡಿಸಿಪಿ ಕೃಷ್ಣಕಾಂತ ಅವರ ಮಧ್ಯೆ ನಡೆಯುತ್ತಿದ್ದ ಶೀತಲ ಸಮರಕ್ಕೆ ರಾಜ್ಯ ಸರ್ಕಾರ ಬ್ರೇಕ್ ನೀಡಿದೆ. ಈ ಮೂಲಕ ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತರನ್ನಾಗಿ ಲಾಬು ರಾಮ್ ಅವರನ್ನು ನೇಮಕ ಮಾಡಲಾಗಿದೆ.
ಧಾರವಾಡ ಜಿಲ್ಲಾ ಹಾಗೂ ಕಮೀಷನರೇಟ್ ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಪೊಲೀಸ್ ಆಯುಕ್ತ ಆರ್.ದಿಲೀಪ್, ಡಿಸಿಪಿ ಕೃಷ್ಣಕಾಂತ ಸೇರಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನೂ ರಾಜ್ಯ ಸರ್ಕಾರ ಇದೀಗ ವರ್ಗಾವಣೆಗೊಳಿಸಿದೆ.
ಪೊಲೀಸ್ ಆಯುಕ್ತ ಆರ್.ದಿಲೀಪ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿದ್ದು, ಡಿಸಿಪಿ ಕೃಷ್ಣಕಾಂತ ಅವರನ್ನು ಧಾರವಾಡ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಿದ್ದು, ವರ್ತಿಕಾ ಕಟಿಯಾರ್ ಅವರಿಗೆ ಬಡ್ತಿ ನೀಡಿ ದೆಹಲಿಯ ಇಂಟಲಿಜನ್ಸಿ ಬ್ಯೂರೋ ಜಂಟಿ ನಿರ್ದೇಶಕಿ ಹುದ್ದೆಗೆ ನೇಮಕ ಮಾಡಿದೆ.
Kshetra Samachara
20/10/2020 10:38 pm