ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯೋಗೀಶ್‌ಗೌಡ ಹತ್ಯೆ: ಇನ್‌ಸ್ಪೆಕ್ಟರ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್‌

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಗರಿಕರ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡದ ನಾಲ್ಕನೇ ಹೆಚ್ಚುವರಿ ನ್ಯಾಯಾಲಯವು ಅ.22ಕ್ಕೆ ಮುಂದೂಡಿದೆ.

ಈ ಹಿಂದೆ ಅ.15ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು, ಈ ಪ್ರಕರಣ ಕುರಿತಂತೆ ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು ಇಂದು ಅ.20ಕ್ಕೆ ಮುಂದೂಡಿತ್ತು. ಇಂದು ಮತ್ತೆ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಮತ್ತೇ ಅ.22ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಈ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತಕರಾರು ಅರ್ಜಿ ಸಲ್ಲಿಸಿದ್ದರು. ಧಾರವಾಡ ಜಿ.ಪಂ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಹಲವು ಗಂಭೀರ ಆರೋಪಗಳಿಗೆ ಗುರಿಯಾಗಿರುವ ಹುಬ್ಬಳ್ಳಿ-ಧಾರವಾಡದ ಹಲವು ಪೊಲೀಸ್ ಅಧಿಕಾರಿಗಳಿಗೆ ಬಂಧನ ಭೀತಿ ಎದುರಾಗುವ ಸಾಧ್ಯತೆಗಳಿವೆ ಎನ್ನುವ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

21/10/2020 11:22 pm

Cinque Terre

17.03 K

Cinque Terre

1

ಸಂಬಂಧಿತ ಸುದ್ದಿ