ಧಾರವಾಡ : ಅಕ್ಟೋಬರ್ 28 ರಂದು ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನದ ಹಿನ್ನಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥಿತ ಚುನಾವಣೆ ನಡೆಸುವ ಉದ್ದೇಶದಿಂದ ಅಕ್ಟೋಬರ್ 27ರ ಸಂಜೆ 5 ಗಂಟೆಯಿಂದ ಅಕ್ಟೋಬರ್ 28ರ ಸಂಜೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ಸ್ಕ್ಯಾನಿಂಗ್, ಝರಾಕ್ಸ್ ಹಾಗೂ ಕಂಪ್ಯೂಟರ್ ಸೆಂಟರ್ಗಳನ್ನು ಮತದಾನ ಅವಧಿಯಲ್ಲಿ ಕಾರ್ಯನಿರ್ವಹಿಸದಂತೆ ನಿರ್ಬಂಧಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಅನ್ವಯ ಈ ಆದೇಶ ಹೊರಡಿಸಲಾಗಿದೆ. ಆದೇಶ ಉಲ್ಲಂಘಿಸುವ ಇಂತಹ ಕೇಂದ್ರಗಳ ಮಾಲೀಕರು ಯಾವುದೇ ಪರಿಹಾರಕ್ಕೆ ಅರ್ಹರಾಗಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
Kshetra Samachara
25/10/2020 02:03 pm