ಧಾರವಾಡ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮನೆಯೊಂದು ಸುಟ್ಟು ಕರಕಲಾದ ಘಟನೆ ನಗರದ ಮಾಳಮಡ್ಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಮಹಿಷಿ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಈ ಘಟನೆಯಿಂದಾಗಿ ಅಕ್ಕ ಪಕ್ಕದ ನಿವಾಸಿಗಳು ಕೆಲ ಕಾಲ ಭೀತಿಯಲ್ಲಿದ್ದರು.
Kshetra Samachara
26/10/2020 11:10 am