ಅಣ್ಣಿಗೇರಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಆಧಾರಿತ ಘಟನೆಯನ್ನು ಚಿತ್ರೀಕರಣದ ಮೂಲಕ ಪ್ರಸಾರ ಮಾಡುತ್ತಿರುವ ಜೀ ಕನ್ನಡ ವಾಹಿನಿಗೆ ಅಭಿನಂದನೆಗಳನ್ನು ಸಲ್ಲಿಸುವ ಸಲುವಾಗಿ ಅಂಬೇಡ್ಕರ್ ಭಾವಚಿತ್ರ ಇರುವ ಬ್ಯಾನರ್ ನಿರ್ಮಿಸಿ ಪ್ರತಿ ಗ್ರಾಮಗಳಲ್ಲಿ ಅಳವಡಿಸಲಾಗಿದೆ.
ಗ್ರಾಮಗಳಲ್ಲಿ ಅಳವಡಿಸಿದ ಮಹಾನಾಯಕ ಅಂಬೇಡ್ಕರ್ ಬ್ಯಾನರನ್ನು ಯಾರೋ ದುಷ್ಕರ್ಮಿಗಳು ಹರಿದು ಹಾಕಿ ಅವಮಾನ ಮಾಡುತ್ತಿದ್ದಾರೆ. ಇಂತಹ ದುಷ್ಕರ್ಮಿಗಳನ್ನು ಕೂಡಲೇ ಹಿಡಿದು ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸಿ ಮಣಕವಾಡ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ರಾತ್ರೋ ರಾತ್ರಿ ಪ್ರತಿಭಟನೆ ನಡೆಸಲಾಯಿತು.
ಸ್ಥಳಕ್ಕೆ ತಹಶೀಲ್ದಾರ್ ಕೊಟ್ರೇಶ್ವರ ಗಾಳಿ, ಸಿಪಿಐ ಚಂದ್ರಶೇಖರ ಮಠಪತಿ, ಪಿಎಸ್ಐ ಲಾಲಸಾಬ ಜೂಲಕಟ್ಟಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ 'ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಆದಷ್ಟು ಬೇಗನೆ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು' ಎಂದು ಭರವಸೆ ನೀಡಿದರು.
Kshetra Samachara
08/11/2020 11:42 pm