ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ದಿನಾಂಕ 13-11-2020 ರಂದು ಧಾರವಾಡದಲ್ಲಿ ನಡೆಯುವ ಕಾರ್ಯಕ್ರಮಗಳ ವಿವರ

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ನವನಗರದ ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಾಸ್ಟರ್ ಪ್ಯಾನ್ (CDP)ಯನ್ನು ಕುರಿತು ಸಭೆ ಜರುಗಲಿದೆ.

ಧಾರವಾಡ:

1) ಸಹಕಾರ ಇಲಾಖೆಯು ಕೋವಿಡ್-19 ರ ಸಂಕಷ್ಟದ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೂಪಿಸಿದ ವಿವಿಧ ಯೋಜನೆಗಳಡಿ ಬೆಳಗಾವಿ ಪ್ರಾಂತ್ಯದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಹಾಗೂ ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳ ಸಹಯೋಗದಲ್ಲಿ ಆರ್ಥಿಕ ಸ್ಪಂದನ ಸಾಲ ವಿತರಣಾ ಕಾರ್ಯಕ್ರಮವನ್ನು ನವೆಂಬರ್ 13ರಂದು ಬೆಳಿಗ್ಗೆ 10-30 ಗಂಟೆಗೆ ಕಲಾಭವನದಲ್ಲಿ ಆಯೋಜಿಸಲಾಗಿದೆ.

2) ಸುವರ್ಣ ಸಾಂಸ್ಕೃತಿಕ ಸಮುಚ್ಛಯ ನವೀಕರಣಗೊಂಡ ಸಭಾಭವನದ ಉದ್ಘಾಟನಾ ಸಮಾರಂಭವನ್ನು ನವೆಂಬರ್ 13ರಂದು ಬೆಳಿಗ್ಗೆ 10-30 ಗಂಟೆಗೆ ಕಾಲೇಜು ರಸ್ತೆಯಲ್ಲಿರುವ (ರಂಗಾಯಣ ಆವರಣ) ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

Edited By : Vijay Kumar
Kshetra Samachara

Kshetra Samachara

12/11/2020 07:51 pm

Cinque Terre

12.29 K

Cinque Terre

0

ಸಂಬಂಧಿತ ಸುದ್ದಿ