ಕುಂದಗೋಳ: ಕೊಟ್ಟಿಗೆ ಕುಸಿದು ಬಿದ್ದ ಪರಿಣಾಮ ಆಕಳೊಂದು ಅಸುನೀಗಿದ ಘಟನೆ ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದಲ್ಲಿ ನಡೆದಿದೆ.
ಗುಡಗೇರಿ ಗ್ರಾಮದ ವೆಂಕನಗೌಡ ಕಲ್ಲನಗೌಡ ಮುರೆಗೇಣ್ಣನವರ ಅವರಿಗೆ ಸೇರಿದ ದನದ ಕೊಟ್ಟಿಗೆ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ ಕೊಟ್ಟಿಗೆಯಲ್ಲಿ ಕಟ್ಟಿದ್ದ ಆಕಳು ಅವಘಡಕ್ಕೆ ತುತ್ತಾಗಿ ಸಾವನ್ನಪ್ಪಿದೆ. ಘಟನಾ ಸ್ಥಳಕ್ಕಾಗಮಿಸಿದ ಕಾಂಗ್ರೆಸ್ ಮುಖಂಡ ಶಿವಾನಂದ ಬೆಂತೂರು ಸಂಬಂಧಪಟ್ಟ ಅಧಿಕಾರಿಗಳ ಹಾಗೂ ತಹಶೀಲ್ದಾರ್‌ಗೆ ಮಾಹಿತಿ ನೀಡಿದ್ದಾರೆ.
Kshetra Samachara
16/11/2020 12:15 pm