ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅವಳಿ ನಗರದಲ್ಲಿ ನಾಳೆ 19.11.2020 ರಂದು ನಡೆಯುವ ಕಾರ್ಯಕ್ರಮಗಳ ಮಾಹಿತಿ

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆಯವರು ಘಂಟಿಕೇರಿ ಕ್ರಿಶ್ಚಿಯನ್ ಕಾಲನಿ ಸರ್ಕಾರಿ ಬಾಲಮಂದಿರದಲ್ಲಿ ಮಕ್ಕಳ ಯೋಗಾಭ್ಯಾಸ, ಏರೋಬಿಕ್ಸ್ ವೀಕ್ಷಿಸುವರು.

ಅಲ್ಲದೇ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವರು.

19-11-2020 ರಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚವ್ಹಾಣ ಅವರು ಹುಬ್ಬಳ್ಳಿ ಪ್ರವಾಸ ಕೈಗೊಂಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ನಾಳೆ ಬೆಳಿಗ್ಗೆ 11ಕ್ಕೆ ಧಾರವಾಡ ನಗರದ ಲಕಮನಹಳ್ಳಿಯ ಚಂದ್ರಿಕಾ ಬಡಾವಣೆಯ ಕೆಎಚ್ ಬಿ ಕಾಲೊನಿಯಲ್ಲಿರುವ ಕರ್ನಾಟಕ ಬಾಲವಿಕಾಸ ಅಕಾಡೆಮಿಗೆ ಭೇಟಿ ನೀಡಿ ಅಕಾಡೆಮಿಯ ವೆಬ್ ಸೈಟ್ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.

ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌಹಾಣ ಅವರು ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿ ಮಧ್ಯಾಹ್ನ 3-30 ಗಂಟೆಗೆ ಅಮ್ಮಿನಭಾವಿ ಪಶು ಆಸ್ಪತ್ರೆಯ ಹೊಸ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸುವರು.

Edited By : Nirmala Aralikatti
Kshetra Samachara

Kshetra Samachara

18/11/2020 09:45 pm

Cinque Terre

11.76 K

Cinque Terre

0

ಸಂಬಂಧಿತ ಸುದ್ದಿ