ಹುಬ್ಬಳ್ಳಿ: ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ತುಳಜಾಭವಾನಿ ದೇವಸ್ಥಾನದಲ್ಲಿ ಎಸ್.ಎಸ್.ಕೆ. ಸಮಾಜದ ಅಖಂಡ ದಿವ್ಯ ಜ್ಯೋತಿ ಸಮಿತಿಯಿಂದ ದೀಪಗಳ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಇದೇ ನವೆಂಬರ್ 21 (ಶನಿವಾರ) ಸಂಜೆ 6.30 ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಗಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಶಾಸಕ ಪ್ರಸಾದ್ ಅಬ್ಬಯ್ಯ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ನೀಲಕಂಠಸಾ ಜಡಿ ವಹಿಸಲಿದ್ದಾರೆ.
Kshetra Samachara
19/11/2020 08:42 am