ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯ ರಂಗಕರ್ಮಿ ಡಾ.ಟಿ.ಬಿ.‌ಸೊಲಬಕ್ಕನವರ ವಿಧಿವಶ

ಶಿಗ್ಗಾವಿ: ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರು ಹಾಗೂ ಗೊಟಗೋಡಿಯ ರಾಕ್ ಗಾರ್ಡನ್ ರೂವಾರಿ, ಹಿರಿಯ ರಂಗಕರ್ಮಿ ಡಾ.ಟಿ.ಬಿ. ಸೊಲಬಕ್ಕನವರ (73) ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಡಾ.ಟಿ.ಬಿ. ಸೊಲಬಕ್ಕನವರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಗುರುವಾರ ಮಧ್ಯರಾತ್ರಿ 2.45ರ ಸುಮಾರಿಗೆ ವಿಧಿವಶರಾಗಿದ್ದಾರೆ.

ಟಿ.ಬಿ. ಸೊಲಬಕ್ಕನವರ ಅವರು ಪತ್ನಿ ಸಾವಿತ್ರಮ್ಮ, ಪುತ್ರಿ ವೇದಾರಾಣಿ, ಪುತ್ರ ರಾಜಹರ್ಷ ಹಾಗೂ ಅಳಿಯ ಉದ್ಯಮಿ ಪ್ರಕಾಶ ದಾಸನೂರ ಅವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ರಾಕ್ ಗಾರ್ಡನ್ ಪಕ್ಕ ನ್ಯೂ ವರ್ಕ್ ಶಾಪ್ ಹತ್ತಿರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Edited By : Vijay Kumar
Kshetra Samachara

Kshetra Samachara

19/11/2020 08:54 am

Cinque Terre

29.93 K

Cinque Terre

15

ಸಂಬಂಧಿತ ಸುದ್ದಿ