ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಶ್ರಯ ನಿವೇಶನದ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ

ಅಣ್ಣಿಗೇರಿ : ಪಟ್ಟಣದ ಸೈದಾಪೂರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ 18 ಎಕರೆ ಆಶ್ರಯ ನಿವೇಶನದ ಪ್ರದೇಶವನ್ನು ಜಿಲ್ಲಾಧಿಕಾರಿ ಡಾ.ನಿತೇಶ ಪಾಟೀಲ ಹಾಗೂ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಬೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾತನಾಡಿದ ಶಾಸಕ ಮುನೇನಕೊಪ್ಪ ಶೀಘ್ರದಲ್ಲೇ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗುವುದು. ಸೂರು ಇಲ್ಲದವರಿಗೆ ಸೂರು ಒದಗಿಸುವದೇ ನಮ್ಮ ಉದ್ದೇಶವಾಗಿದೆ ಎಂದು ನಗರ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಹಾಗೂ ಹಣಕಾಸು ಸಂಸ್ಥೆ ಅಧ್ಯಕ್ಷ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ಜಿಲ್ಲಾಧಿಕಾರಿ ಡಾ. ನಿತೇಶ ಪಾಟೀಲ. ಷಣ್ಮುಖ ಗುರಿಕಾರ. ಕೆ.ಎಫ್‌.ಕಟಗಿ. ಕೊಟ್ರೇಶ ಗಾಳಿ..ನವೀನ ಹುಲ್ಲೂರ. ಶಿವಯೋಗಿ ಸುರಕೋಡ ಮೊದಲಾದವರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

23/11/2020 07:44 pm

Cinque Terre

9.98 K

Cinque Terre

1

ಸಂಬಂಧಿತ ಸುದ್ದಿ