ಕುಂದಗೋಳ: ತಾಲೂಕು ಕಾನೂನು ಸೇವಾ ಸಮಿತಿ, ಹಾಗೂ ವಕೀಲರ ಸಂಘ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಪಟ್ಟಣ ಪಂಚಾಯಿತಿ, ಶಿಶು ಮತ್ತು ಮಹಿಳಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತುಂಬಾಕು ದುಷ್ಪರಿಣಾಮ ಕುರಿತು ಜನ ಜಾಗೃತಿ ಮೂಡಿಸಲಾಯಿತು.
ಹಿರಿಯ ನ್ಯಾಯಾಧೀಶರಾದ ಶೈನಿ ಕೆ.ಎಂ ತುಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಿದರು. ಬಳಿಕ ಎಲ್ಲ ಅಧಿಕಾರಿಗಳ ಸಮ್ಮುಖದಲ್ಲಿ ಕುಂದಗೋಳ ಪಟ್ಟಣದಲ್ಲಿನ ಮಳಿಗೆಗಳಿಗೆ ಭೇಟಿ ನೀಡಿ 18 ವರ್ಷಕ್ಕಿಂತ ಒಳಗಿನವರಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡದಂತೆ ಎಚ್ಚರಿಸಿದರು.
Kshetra Samachara
23/11/2020 10:42 pm