ಧಾರಾವಾಡ : ಜಿಲ್ಲಾ ಪಂಚಾಯತ ಧಾರವಾಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಗ್ರಾಮ ಪಂಚಾಯತ ಹಾಲಕುಸುಗಲ್ಲ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಬೆಳಿಗ್ಗೆ ಹಾಲಕುಸುಗಲ್ಲ ಗ್ರಾಮದಲ್ಲಿ ಮಕ್ಕಳ ಗ್ರಾಮ ಸಭೆ ಜರುಗಿತು.
ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳು ಮಕ್ಕಳ ರಕ್ಷಣೆ ಕುರಿತಾದ ಮಾಹಿತಿ ತಿಳಿಸಲಾಯಿತು. ಬಾಲ್ಯದಲ್ಲಿ ಮಕ್ಕಳನ್ನು ನೋಡಿಕೊಳ್ಳುವ ಪಾಲಕರು ಜವಾಬ್ದಾರಿ ಮತ್ತು ಮಕ್ಕಳ ಜೀವನದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತಂತೆ ವಿಶೇಷ ಕಾಳಜಿ ಕುರಿತು ತಿಳಿಸಿ ಬಾಲ್ಯದಲ್ಲಿ ವಹಿಸಬೇಕಾದ ಅಗತ್ಯ ಕ್ರಮಗಳ ಕುರಿತು ಅರಿವು ಮೂಡಿಸಲಾಯಿತು.
Kshetra Samachara
24/11/2020 07:35 pm