ಧಾರವಾಡ : ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿನ ಜೀವನಾಡಿಯಾಗಿದ್ದು, ಸಾರ್ವಜನಿಕ ಪ್ರಯಾಣಿಕರಿಗೆ ಸುರಕ್ಷಿತ, ಸುಖಕರ ಹಾಗೂ ಮಿತವ್ಯಯಕರ ಸೇವೆಯನ್ನು ಸಲ್ಲಿಸುತ್ತಿದೆ.
ಸೆ. 21, 2020 ರಿಂದ 28 ರವರೆಗೆ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗೆಳು ಇರುವುದರಿಂದ ಸದರಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ ಸಂಸ್ಥೆಯ ಧಾರವಾಡ, ಕಾರವಾರ, ಬಾಗಲಕೋಟ, ಹಾವೇರಿ, ಬೆಳಗಾವಿ ಮತ್ತು ಗದಗ ಜಿಲ್ಲೆಗಳ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹುಬ್ಬಳ್ಳಿ ವಾಕರಸಾ ಸಂಸ್ಥೆಯ ಕೇಂದ್ರ ಕಛೇರಿಯಿಂದ ತಿಳಿಸಿದ್ದಾರೆ.
Kshetra Samachara
19/09/2020 12:57 pm