ಧಾರವಾಡ : ನಗರದ ಧಾರವಾಡದ ಕರ್ನಾಟಕ ನೀರಾವರಿ ನಿಗಮ ಕಛೇರಿಯನ್ನು ಸ್ಥಳಾಂತರ ಮಾಡದಂತೆ ಕಳೆದ 12 ದಿನಗಳಿಂದ ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದಲ್ಲಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿ ಹೋರಾಟ ನಡೆಸಿದ್ದರು ನಂತರ ಬೆಳಗಾವಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹಾಗೂ ನೀರಾವರಿ ನಿಗಮದ ಎಮ್ ಡಿ ಮಲ್ಲಿಕಾರ್ಜುನ ಗುಂಗೆ ಅವರಿಗೆ ಮನವಿ ಸಲ್ಲಿಸಿದರು.
ಈ ಮನವಿಗೆ ಸ್ಪಂದಿಸಿದ ಸರ್ಕಾರ ಧಾರವಾಡದಲ್ಲಿಯೇ ಕರ್ನಾಟಕ ನೀರಾವರಿ ನಿಗಮದ ಕೇಂದ್ರ ಕಚೇರಿಯನ್ನು ಮುಂದುವರೆಸುವಂತೆ ಅಧಿಕೃತ ಆದೇಶ ಹೊರಡಿಸಿದೆ.
ಅಲ್ಲದೆ, ಕಚೇರಿಯನ್ನು ಧಾರವಾಡದಲ್ಲಿಯೇ ಮುಂದುವರೆಸಬೇಕು. ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಿಸಬಾರದು ಎಂದು ಹೋರಾಟ ನಡೆಸಿ ಸರಕಾರದ ಗಮನ ಸೆಳೆದಿದ್ದರು.
ಪಬ್ಲಿಕ್ ನೆಕ್ಸ್ಟ್ ಜೊತೆ ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಮಾತನಾಡಿ,ಈ ಆದೇಶದಿಂದ ಎಲ್ಲ ರೈತ ಪರ ಸಂತಸ ಮೂಡಿಸಿದೆ.
ಈಗಾಗಲೇ ನುಗ್ಗೆಕೇರಿ ಹತ್ತಿರ 2 ಎಕರೆ ಭೂಮಿ ಖರೀದಿ ಮಾಡಲಾಗಿದೆ.
ಅಲ್ಲಿ ನೀರಾವರಿ ನಿಗಮ ಕಚೇರಿಯ ಹೊಸ ಕಟ್ಟಡ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.
Kshetra Samachara
22/09/2020 08:44 am