ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಸ್ತ್ರೀ ಶಕ್ತಿ ಸಂಘದ ಸಾಲಯೋಜನೆ ದೇಶಕ್ಕೆ ಮಾದರಿ; ಶಾಸಕಿ ಕುಸುಮಾವತಿ ಶಿವಳ್ಳಿ

ಮಹಿಳೆಯರ ಸಬಲೀಕರಣದ ದೃಷ್ಟಿಯಿಂದ ಮಹಿಳಾ ಅಭಿವೃದ್ಧಿ ಇಲಾಖೆಯಡಿ ಅಮೃತ ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ನೀಡುತ್ತಿರುವ ಬಡ್ಡಿ ರಹಿತ ಸಾಲ ಯೋಜನೆ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.

ನೂಲ್ವಿ ಗ್ರಾಮದ ರೇಣುಕಾಚಾರ್ಯ ವಿದ್ಯಾಲಯದ ಸಭಾ ಭವನದಲ್ಲಿ ಏರ್ಪಡಿಸಿದ್ದ ಸಾಲ ಸೌಲಭ್ಯದ ಚೆಕ್ ವಿತರಣೆ ಸಮಾರಂಭದಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ 50 ಲಕ್ಷ ಮೊತ್ತದ ಚೆಕ್‌ ವಿತರಿಸಿ ಮಾತನಾಡಿದ ಅವರು, ಈ ಮೊತ್ತವನ್ನು 35 ಸ್ತ್ರೀ ಶಕ್ತಿ ಸಂಘಗಳ 500 ಮಹಿಳಾ ಸದಸ್ಯರಿಗೆ ನೀಡಲಾಗಿದೆ. ಪಡೆದ ಹಣವನ್ನು ಉದ್ದೇಶಿತ ಅಭಿವೃದ್ಧಿ ಚಟುವಟಿಕೆಯಲ್ಲಿ ತೊಡಗಿಸಿ, ಸಕಾಲಕ್ಕೆ ಸಾಲ ಮರುಪಾವತಿ ಮಾಡುವುದರ ಮೂಲಕ ರಾಜ್ಯದ ಮಹಿಳೆಯರಿಗೆ ಮಾದರಿಯಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿಶು ಯೋಜನಾಧಿಕಾರಿ ದೀಪಾ ಜಾವೋರ, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಸೇರಿದಂತೆ ಗ್ರಾಮದ ಸ್ಥಳೀಯ ಮುಖಂಡರು ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದು ಶಾಸಕರಿಗೆ ಸನ್ಮಾನ ಮಾಡಿದರು.

Edited By :
Kshetra Samachara

Kshetra Samachara

28/07/2022 01:06 pm

Cinque Terre

19.05 K

Cinque Terre

0

ಸಂಬಂಧಿತ ಸುದ್ದಿ