75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವಕ್ಕೆ ವಿದ್ಯಾಕಾಶಿ ಧಾರವಾಡ ಸಿದ್ಧವಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧಾರವಾಡದ ಬಿಆರ್‌ಟಿಎಸ್ ಬಸ್ ನಿಲ್ದಾಣದ ಗೋಡೆ ಮೇಲೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳು ತಲೆ ಎತ್ತಿ ನಿಲ್ಲುತ್ತಿವೆ.
ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯು ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಗೋಡೆ ಮೇಲೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಬಿಡಿಸಲು ಸೂಚಿಸಿದ್ದು, ಇದೀಗ ಈ ಗೋಡೆ ಮೇಲೆ ಮಹಾತ್ಮ ಗಾಂಧೀಜಿ, ಭಗತ್ ಸಿಂಗ್ ಹಾಗೂ ಸುಭಾಷಚಂದ್ರ ಬೋಸ್ ಅವರ ಭಾವಚಿತ್ರ ಬಿಡಿಸಲಾಗುತ್ತಿದೆ.
Kshetra Samachara
12/08/2022 12:40 pm