75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಧಾರವಾಡದ ಶ್ರೀಸಾಯಿ ಪದವಿಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜು ವಿಶಿಷ್ಠವಾದ ಕಾರ್ಯಕ್ರಮ ಹಮ್ಮಿಕೊಂಡಿತ್ತು. 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ 75 ಜನ ಯೋಧರಿಗೆ ಶ್ರೀಸಾಯಿ ಕಾಲೇಜು ದೇಶ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡಿದೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೂ ಮುನ್ನ ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಿಂದ ಸೈನಿಕರನ್ನು ಮೆರವಣಿಗೆ ಮೂಲಕ ಕರೆದುಕೊಂಡು ಹೋಗಲಾಯಿತು. ನೌಕರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ., ವರದಶ್ರೀ ಫೌಂಡೇಶನ್ ಸಂಸ್ಥಾಪಕ ಮಲ್ಲಿಕಾರ್ಜುನ ರಡ್ಡೇರ, ಚಂದ್ರಶೇಖರ ಅಮಿನಗಡ, ಕಾಲೇಜಿನ ಅಧ್ಯಕ್ಷೆ ಡಾ.ವೀಣಾ ಬಿರಾದಾರ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ನಂತರ 75 ಜನ ಮಾಜಿ ಯೋಧರಿಗೆ ದೇಶ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾಲೇಜಿನ ಪ್ರಾಚಾರ್ಯ ಪ್ರೊ.ನಾಗರಾಜ ಶಿರೂರ ಸೇರಿದಂತೆ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Kshetra Samachara
13/08/2022 04:45 pm