ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 'ಬ್ರಿಟಿಷ್ ಆಡಳಿತದ ರೀತಿ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದೆ'

ಮಂಗಳೂರಿನಲ್ಲಿ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ನಿರ್ಬಂಧ ಹಾಕುವುದು ಸರಿಯಲ್ಲ. ಇದು ಬ್ರಿಟಿಷ್ ಆಡಳಿತದ ಸರ್ವಾಧಿಕಾರಿ ಧೋರಣೆಯಾಗಿದೆ. ಸಮಾಜದಲ್ಲಿ ಎಲ್ಲರಿಗೂ ಮುಕ್ತವಾದ ಸಮಾನ ಅವಕಾಶವಿದೆ. ಪ್ರತಿಯೊಬ್ಬರ ಅವಕಾಶಗಳನ್ನು ಕಿತ್ತುಕೊಳ್ಳುವುದು ಸರಿಯಲ್ಲ ಎಂದು ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮುದಾಯದ ಮುಖಂಡ ಆಸ್ಪಾಕ್ ಕುಮಟಾಕರ್ ಪಬ್ಲಿಕ್ ನೆಕ್ಸ್ಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ರೀತಿ ವ್ಯಾಪಾರ ವಹಿವಾಟು ನಿಷೇಧದ ಮೂಲಕ ಜಾತೀಯತೆ ಮಾಡಬಾರದು. ನಾವೆಲ್ಲರೂ ಒಂದೇ, ರಾಜ್ಯದಲ್ಲಿ ಮುಸ್ಲಿಂ ಸಮುದಾಯದವರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಬ್ರಿಟಿಷ್ ಆಡಳಿತದ ರೀತಿ ಮುಸ್ಲಿಂರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ರೀತಿ ಮಾಡುವುದು ಬಿಟ್ಟು ಎಲ್ಲರಿಗೂ ಸಮಾನ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

Edited By :
Kshetra Samachara

Kshetra Samachara

23/03/2022 05:33 pm

Cinque Terre

46.74 K

Cinque Terre

32

ಸಂಬಂಧಿತ ಸುದ್ದಿ