ದೇಶದಲ್ಲಿ ಇಸ್ಲಾಮಿಕ್ ಜಿಹಾದಿಗಳ ಧರ್ಮಾಂಧತೆಯಿಂದ ಹಿಂಸಾಚಾರ ಹೆಚ್ಚುತ್ತಿದ್ದು, ಈ ಕುಕೃತ್ಯ ಎಸಗುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಇಸ್ಲಾಮಿಕ್ ಜಿಹಾದಿಗಳು ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಸುತ್ತಿದ್ದಾರೆ. ಶ್ರೀರಾಮ ನವಮಿಯಂದು ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಅಲ್ಲದೆ, ಹನುಮ ಜಯಂತಿ ಮೆರವಣಿಗೆ ಮೇಲೂ ಕಲ್ಲು ತೂರಿ ಧರ್ಮಾಂಧತೆ ಮೆರೆದಿದ್ದಾರೆ. ಕರ್ನಾಟಕದಲ್ಲಿ ಈ ಹಿಂದೆ ಹಿಜಾಬ್ ವಿವಾದ ನಡೆದಾಗ ಬಜರಂಗದಳದ ಕಾರ್ಯಕರ್ತ ಹರ್ಷ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಇತ್ತೀಚೆಗೆ ಹಿಂದೂಗಳ ಮನೆ, ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪೊಲೀಸ್ ಪಡೆಗಳೂ ದಾಳಿಗೆ ಹೊರತಾಗಿಲ್ಲ. ಅನಾಚಾರಿಗಳು ಕೋಮು ದ್ವೇಷ ಹರಡುವ ಹೇಳಿಕೆ ನೀಡುತ್ತಿದ್ದರೂ ರಾಜಕೀಯ ಪಕ್ಷಗಳು ಮೌನ ವಹಿಸಿವೆ.
ಇಂತಹ ದುಷ್ಕರ್ಮಿಗಳ ವಿರುದ್ಧ ರಾಷ್ಟ್ರೀಯ ಸುರಕ್ಷತಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಾಯಿತು.
Kshetra Samachara
16/06/2022 01:28 pm