ಭಾರತ ಶಾಂತಿಯ ತೋಟ. ಶಾಂತಿಗೆ ಹೆಸರಾದ ದೇಶ. ಇಂತಹ ದೇಶದಲ್ಲಿ ಶಾಂತಿ ಕದಡುವ ಕೆಲಸವಾಗುತ್ತಿದೆ. ಆ ಮೂಲಕ ಉದ್ವಿಗ್ನತೆ ಉಂಟಾಗುವಂತೆ ಮಾಡಲಾಗುತ್ತಿದೆ. ಈ ಪರಿಸ್ಥಿತಿಯನ್ನು ಹತೋಟಿಗೆ ತರುವಂತೆ ಆಗ್ರಹಿಸಿ ಅಂಜುಮನ್-ಎ-ಇಸ್ಲಾಂ ಸಂಸ್ಥೆ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಇತ್ತೀಚೆಗೆ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರು ಪ್ರವಾದಿ ಮೊಹ್ಮದ್‌ರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, ಇಡೀ ದೇಶದಲ್ಲಿ ವಿವಾದ ಹುಟ್ಟು ಹಾಕಿದೆ. ಇವರ ಹೇಳಿಕೆಯಿಂದ ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ಕೋಪ, ಪ್ರತೀಕಾರದಿಂದ ಭಾರತದ ಚಿತ್ರಣ ಜಾಗತಿಕವಾಗಿ ಅಪಾಯದಲ್ಲಿದೆ. ಯಾವುದೇ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡುವವರ ಮೇಲೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು.
ನೂಪುರ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರ ಹೇಳಿಕೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
16/06/2022 02:49 pm