ಹೆರಿಗಾಗಿ ಮಹಿಳೆಯನ್ನು ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುತ್ತಿರುವ ವೇಳೆಯಲ್ಲಿ, ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಹೌದು. ಹಳ್ಯಾಳದಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಮಹಿಳೆಯನ್ನು ಆಂಬುಲೆನ್ಸ್‌ದಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಮಹಿಳೆಗೆ ಹೊಟ್ಟೆ ನೋವು ಜಾಸ್ತಿ ಆಗಿದ್ದರಿಂದ ಮಹಿಳೆ ಚನ್ನಮ್ಮ ವೃತ್ತದ ಬಳಿ ಆಂಬುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭವಾಗಿದ್ದು, ಮಗು ಸುರಕ್ಷಿತವಾಗಿದೆ ಎಂದು ತಿಳಿದು ಬಂದಿದೆ.
Kshetra Samachara
23/03/2022 11:27 am