ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆ; ಬೆಂಕಿ ಜ್ವಾಲೆ, ತಪ್ಪಿದ ದುರಂತ

ತಾಲೂಕಿನ ನೂಲ್ವಿ ಗ್ರಾಮದಲ್ಲಿನ ಮನೆಯೊಂದರಲ್ಲಿ ಅಡುಗೆ ಮಾಡುವ ವೇಳೆ ಸಿಲಿಂಡರ್ ಸೋರಿಕೆಯಾಗಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ನೂಲ್ವಿ ಗ್ರಾಮದ ಬಸವರಾಜ ಲಕ್ಕಣ್ಣನವರ ಎಂಬುವವರ ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಗೋಣಿಚೀಲ ಹಾಕಿ ಬೆಂಕಿ ನಂದಿಸಲು ಯತ್ನಿಸಿ ವಿಫಲವಾದ ಕುಟುಂಬ ಸದಸ್ಯರು ಮನೆಯಿಂದ ಹೊರಗೋಡಿ ಬಂದಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಅಡುಗೆಮನೆಯಲ್ಲಿದ್ದ ವಸ್ತುಗಳು ಸುಟ್ಟು ಹೋಗಿವೆ ಎಂದು ಸ್ಥಳೀಯರು ʼಪಬ್ಲಿಕ್ ನೆಕ್ಸ್ಟ್'ಗೆ ಮಾಹಿತಿ ನೀಡಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

27/06/2022 02:22 pm

Cinque Terre

61.69 K

Cinque Terre

0

ಸಂಬಂಧಿತ ಸುದ್ದಿ