ರಾಜಸ್ಥಾನದ ಉದಯಪುರದಲ್ಲಿ ನಡೆದ ಟೇಲರ್ ಕನ್ಹಯ್ಯಾ ಲಾಲ್ ಅವರ ಬರ್ಬರ ಹತ್ಯೆ ಖಂಡಿಸಿ ಧಾರವಾಡದ ವ್ಯಾಪಾರಸ್ಥರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೌನ ಪ್ರತಿಭಟನೆ ನಡೆಸಿದರು.
ಧಾರವಾಡದ ಕೆಸಿಸಿ ಬ್ಯಾಂಕ್‌ನಿಂದ ವಿವೇಕಾನಂದ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವ್ಯಾಪಾರಸ್ಥರು, ಕನ್ಹಯ್ಯಾ ಲಾಲ್ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸಿದರು.
ಟೇಲರ್ ಕನ್ಹಯ್ಯಾ ಅವರನ್ನು ಹತ್ಯೆ ಮಾಡಿದ ಉಗ್ರರನ್ನು ಗಲ್ಲು ಶಿಕ್ಷೆಗೆ ಗುರಿ ಮಾಡಬೇಕು. ರಾಜಕಾರಣಿಗಳು ತುಷ್ಟೀಕರಣ ನೀತಿ ಬಿಟ್ಟು ಹಂತಕರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಭಾಗವಹಿಸಿದ್ದರು.
Kshetra Samachara
02/07/2022 01:18 pm