ಅನೇಕ ಸಮಸ್ಯೆಗಳಿಂದಾಗಿ ಸಾರಿಗೆ ಇಲಾಖೆ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ಸರ್ಕಾರ ಸಿಬ್ಬಂದಿ ಸಮಸ್ಯೆಗೆ ಸರಿಯಾಗಿ ಸ್ಪಂದಿಸಿಲ್ಲ ಅಂತಾ ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಹೆಚ್.ವಿ. ಅನಂತ ಸುಬ್ಬರಾವ್ ಆರೋಪಿಸಿದ್ದಾರೆ.
ನಗರದಲ್ಲಿಂದು ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು, ನಿವೃತ್ತ ನೌಕರರಿಗೆ ಬರುತ್ತಿದ್ದ ಪೆನ್ಷನ್ನಲ್ಲಿ ಕೂಡ ಹಣ ಕಡಿತಗೊಳಿಸಲಾಗಿದೆ. ಸರ್ಕಾರ ನಮ್ಮೆಲ್ಲ ಬೇಡಿಕೆಗಳನ್ನ ಈಡೇರಿಸುವಂತೆ ಮನವಿ ಸಲ್ಲಿಸಲಾಗಿದೆ. ನಮ್ಮ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದರು.
ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಾಕಷ್ಟು ಸಲ ಮನವಿ ಮಾಡಲಾಗಿದೆ. ಆದರೂ ಅವರು ಯಾವುದೇ ರೀತಿಯಲ್ಲೂ ಸ್ಪಂದಿಸಿಲ್ಲ. ಆದ್ದರಿಂದ ಸರ್ಕಾರ ನಮ್ಮ ಗಂಭೀರತೆಯನ್ನು ಅರಿತುಕೊಂಡು ಬಗೆಹರಿಸಲು ಮುಂದಾಗಬೇಕಾಗಿದೆ ಎಂದರು. ಹಾಗೇ ಪ್ರತಿಯೊಂದು ವಿಷಯದಲ್ಲಿ ಸೇಡಿನ ಕ್ರಮ ಅನುಸರಿಸಲಾಗುತ್ತದೆ ಎಂದು ಆರೋಪಿಸಿದರು.
Kshetra Samachara
02/07/2022 01:28 pm