ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಸೆಂಟ್ರಲ್ ಈಗಾಗಲೇ ಹಲವಾರು ಸಾಮಾಜಿಕ ಕಾರ್ಯಗಳ ಮೂಲಕ ಹೆಸರುವಾಸಿಯಾಗಿದೆ. ಅದರಂತೆ ಇದೀಗ ನೂತನವಾಗಿ ತನ್ನ ಅಧ್ಯಕ್ಷ ಹಾಗೂ ಕಾರ್ಯದರ್ಶಿಯನ್ನು ಆಯ್ಕೆ ಮಾಡಿಕೊಂಡಿದ್ದು, ಅದರ ಪದಗ್ರಹಣ ಕಾರ್ಯಕ್ರಮ ನಗರದ ಖಾಸಗಿ ಹೋಟೆಲ್ ನಲ್ಲಿ ಅದ್ಧೂರಿಯಾಗಿ ನಡೆಯಿತು.
ಹೌದು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬಡಜನರ ಏಳಿಗೆಗಾಗಿ ಶ್ರಮಿಸುತ್ತಿರುವ ರೋಟರಿ ಕ್ಲಬ್ ಇದೀಗ ಮೂರು ವರ್ಷಗಳಿಂದ ಹುಬ್ಬಳ್ಳಿಯಲ್ಲಿ ಕಾರ್ಯಾರಂಭ ಮಾಡಿದ್ದು, ಅನೇಕ ಸಮಾಜಮುಖಿ ಕೆಲಸ ಮಾಡಿ ಜನರ ಪ್ರೀತಿಗೆ ಪಾತ್ರವಾಗಿದೆ. ಅದರಂತೆ ಇಂದು ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಈ ವರ್ಷದ ಅಧ್ಯಕ್ಷರನ್ನಾಗಿ ನೀಪಾ ಮೆಹತಾ, ಹಾಗೂ ಕಾರ್ಯದರ್ಶಿಯಾಗಿ ಡಾ.ನಾಗರಿಕಾ ಹೆಬಸೂರ ಅವರಿಗೆ ಅಧಿಕಾರ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಏನು ಕೆಲಸ ಮಾಡಬೇಕು ಎಂಬುದನ್ನು ಚರ್ಚಿಸಿದರು. ಅಂತಾರಾಷ್ಟ್ರೀಯ ಮಾಜಿ ಅಧ್ಯಕ್ಷ ಸಿ.ಭಾಸ್ಕರ್, ವೆಂಕಟೇಶ ದೇಶಪಾಂಡೆ, ರೇಣುಕಾ ಸಾಳುಂಕೆ, ವಾಸುಕಿ ಸಂಜಿ ಸೇರಿದಂತೆ ಮುಂತಾದ ಸದಸ್ಯರು ಉಪಸ್ಥಿತರಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
11/07/2022 01:59 pm