ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಜುಲೈ 21 ಕ್ಕೆ ರೈತ ಹುತಾತ್ಮ ದಿನಾಚರಣೆ

ರೈತ ಹುತಾತ್ಮ ದಿನಾಚರಣೆ ಅಂಗವಾಗಿ, 42 ನೇ ರೈತ ಹುತಾತ್ಮ ದಿನಾಚರಣೆ ಮತ್ತು ಬೃಹತ್ ರೈತ ಸಮಾವೇಶವನ್ನು ಇದೇ ದಿ. 21 ರಂದು ಗುರುವಾರ ಗದಗ ಜಿಲ್ಲೆಯ ನರಗುಂದ ಪಟ್ಟಣದ ಮಹಾದಾಯಿ ಹೋರಾಟ ವೇದಿಕೆಯಲ್ಲಿ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಮುಖಂಡ ಗುರುರಾಯಣ ಗೌಡ್ರ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಿನ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ ಪ್ರೋ. ಯೋಗೆಂದ್ರ ಯಾದವ್ ನೆರವೇರಿಸಲಿದ್ದಾರೆ ಎಂದರು.

ಇನ್ನು ಅಂದಿನ ಕಾರ್ಯಕ್ರಮದಲ್ಲಿ ಮಹಾದಾಯಿ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡುಯುವುದು, ರೈತ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯಲು, ಕನಿಷ್ಠ ಬೆಂಬಲ ಬೆಲೆ ಖಾತ್ರಿಗಾಗಿ, ಕೃಷ್ಣಾ-ಕಾವೇರಿ ಕೊಳ್ಳದ ಯೋಜನೆಗಳ ಚುರುಕಿಗಾಗಿ, ಪ್ಯಾಕೇಜ್ ಆಹಾರ ಪದಾರ್ಥಗಳ ಮೇಲಿನ ಜಿ.ಎಸ್.ಟಿ ಕೈಬಿಡಲು ಆಗ್ರಹ, ಪ್ರವಾಹ ಪೀಡಿತ ಪ್ರದೇಶದ ನಷ್ಟಕ್ಕೆ ವೈಜ್ಞಾನಿಕ ಪರಿಹಾರದ ನಿಗಧಿಗಾಗಿ ಈ ರೈತ ಸಮಾವೇಶದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಈ ಬೃಹತ್ ರೈತ ಸಮಾವೇಶದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ರೈತ ಸೇನಾ ಕರ್ನಾಟಕದ ರಾಜ್ಯ ಮುಖಂಡರುಗಳು, ಎಲ್ಲಾ ಜಿಲ್ಲಾ, ತಾಲೂಕು ಮುಖಂಡರುಗಳು ಹಾಗೂ ಜನಪರ ಹೋರಾಟಗಾರರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

Edited By :
Kshetra Samachara

Kshetra Samachara

19/07/2022 02:54 pm

Cinque Terre

22.13 K

Cinque Terre

1

ಸಂಬಂಧಿತ ಸುದ್ದಿ