ಹುಬ್ಬಳ್ಳಿ : ರಾಜ್ಯಸಭಾ ಸದಸ್ಯರಾಗಿ ಇತ್ತೀಚೆಗಷ್ಟೇ ಪ್ರಮಾಣ ವಚನ ಸ್ವೀಕರಿಸಿದ್ದ ಅಶೋಕ ಗಸ್ತಿ (55) ಅವರ ಅಕಾಲಿಕ ನಿಧನಕ್ಕೆ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ತಳಮಟ್ಟದ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಹಿರಿಯ ಮುಖಂಡರು ಅವರ ಸೇವೆ ಗುರುತಿಸಿ ಅವಕಾಶ ಕಲ್ಪಿಸಿದ್ದರು ಆದರೆ ಅಕಾಲಿಕವಾಗಿ ಅವರು ಕೊನೆಯುಸಿರೆಳೆದಿರುವುದು ದೊಡ್ಡ ನಷ್ಟವಾಗಿದೆ.
ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಬರಲಿ ಎಂದು ಸಚಿವ ಶೆಟ್ಟರ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Kshetra Samachara
18/09/2020 07:46 pm