ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಸಕರೇ ಗುಂಡಿ ಮುಚ್ಚಿಸಿ.. ಬೆಲ್ಲದ ವಿರುದ್ಧ ಪ್ರತಿಭಟನೆ

ಧಾರವಾಡ: ಧಾರವಾಡ ನಗರದ ಪ್ರಮುಖ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಅವುಗಳನ್ನು ದುರಸ್ತಿಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡದ ದಾಸನಕೊಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಸ್ತೆ ಮಧ್ಯೆಯೇ ಬೈಕ್ ಅಡ್ಡ ಮಲಗಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಶಾಸಕ ಅರವಿಂದ ಬೆಲ್ಲದ ವಿರುದ್ಧ ಧಿಕ್ಕಾರ ಕೂಗಿದರು.

ರಸ್ತೆಗಳು ಸಂಪೂರ್ಣ ಹಾಳಾಗಿದ್ದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅವುಗಳನ್ನು ದುರಸ್ತಿಗೊಳಿಸುವ ಕೆಲಸ ಮಾಡಿಸುತ್ತಿಲ್ಲ. ಹದಗೆಟ್ಟ ರಸ್ತೆಯಲ್ಲಿ ಅನೇಕ ಜನ ಬೈಕ್ ಸವಾರರು ಬಿದ್ದು ಪೆಟ್ಟು ಹಚ್ಚಿಕೊಂಡಿದ್ದಾರೆ. ಕೂಡಲೇ ಶಾಸಕರು ರಸ್ತೆಯನ್ನು ದುರಸ್ತಿಗೊಳಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.

Edited By : PublicNext Desk
Kshetra Samachara

Kshetra Samachara

14/08/2021 04:03 pm

Cinque Terre

11.94 K

Cinque Terre

2

ಸಂಬಂಧಿತ ಸುದ್ದಿ