ಧಾರವಾಡ: 2021 ರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ತಿರಸ್ಕರಿಸಿರುವ ಮತ್ತು ಪಿಯುಸಿ ಪರೀಕ್ಷೆಗೆ ಹಾಜರಾಗಲು ಬಯಸಿರುವ ಖಾಸಗಿ ಅಭ್ಯರ್ಥಿಗಳಿಗೆ ರಾಜ್ಯದಾದಂತ ಏಕಕಾಲದಲ್ಲಿ ಆಗಸ್ಟ್ 19 ರಿಂದ ಸೆಪ್ಟೆಂಬರ್ 03 ವರೆಗೆ ಪ್ರತಿದಿನ ಬೆಳಿಗ್ಗೆ 10-15 ರಿಂದ ಮಧ್ಯಾಹ್ನ 1-30 ರ ವರೆಗೆ ಮತ್ತು ಮಧ್ಯಾಹ್ನ 2-15 ರಿಂದ ಸಂಜೆ 5-30 ರವರೆಗೆ ಪರೀಕ್ಷೆಗಳು ನಡೆಯಲಿವೆ.
ಧಾರವಾಡ ಜಿಲ್ಲೆಯ 05 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು, ಪರೀಕ್ಷೆಗಳನ್ನು ಸುಗಮವಾಗಿ ನಡೆಸುವ ಹಿತದೃಷ್ಟಿಯಿಂದ ದೋಷರಹಿತವಾಗಿ ನಡೆಸಲು ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸುವ ಬಗ್ಗೆ ಹಾಗೂ ಪರೀಕ್ಷಾ ಕೇಂದ್ರಗಳ ಸಮೀಪದ ಝರಾಕ್ಸ್ ಮತ್ತು ಕಂಪ್ಯೂಟರ್ ಸೆಂಟರ್, ಅಂಗಡಿಗಳು ಪರೀಕ್ಷೆಯ ಸಮಯದಲ್ಲಿ ಕಾರ್ಯನಿರ್ವಹಿಸದಂತೆ ನಿಷೇಧಿಸಿ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಿತೇಶ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.
ಈ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ಕಲಂ 107 ಮತ್ತು 100 ಅಡಿಯಲ್ಲಿ ಕ್ರಮವನ್ನು ಜರುಗಿಸಬಹುದೆಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
Kshetra Samachara
18/08/2021 05:17 pm