ಧಾರವಾಡ: ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿರುವ ಡಾ.ರವಿಕುಮಾರ ಸುರಪುರ ಅವರು ಇಂದು ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ತಾಂಡಾ, ತೇಗೂರು, ಹೊಸಟ್ಟಿ ಮತ್ತು ಹೆಗ್ಗೇರಿ ಗ್ರಾಮಗಳಿಗೆ ಭೇಟಿ ನೀಡಿ ಸ್ವಚ್ಛ ಭಾರತ ಮಿಷನ್, ಜಲಜೀವನ ಮಿಷನ್, ಅಂಗನವಾಡಿ ಘನ ತ್ಯಾಜ್ಯ ವಿಲೇವಾರಿ ಘಟಕಗಳ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿ, ಪಿಡಿಓ, ಅಧ್ಯಕ್ಷರು ಹಾಗೂ ಸದಸ್ಯರನ್ನೊಳಗೊಂಡ ಗ್ರಾಮ ಪಂಚಾಯತ್ ಮಟ್ಟದ ಫೆಡರೇಷನ್‌ಗಳನ್ನು ಕ್ರಿಯಾಶೀಲಗೊಳಿಸಲು ಸೂಚಿಸಿದರು.
ಸರ್ಕಾರದ ಯೋಜನೆಗಳನ್ನು ಗುಣಾತ್ಮಕವಾಗಿ ಅನುಷ್ಠಾನಗೊಳಿಸಬೇಕು. ತ್ಯಾಜ್ಯ ವಿಲೇವಾರಿ, ಹಸಿ ಕಸ ಮತ್ತು ಒಣ ಕಸ ವಿಂಡಗಡಣೆ ಕುರಿತು ಪ್ರತಿಯೊಬ್ಬರಿಗೂ ಅರಿವು ಮೂಡಿಸಬೇಕು. ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ, ಯೋಜನೆಗಳ ಪ್ರತಿನಿಧಿಗಳನ್ನೊಳಗೊಂಡ ಗ್ರಾಮ ಪಂಚಾಯತಿ ಮಟ್ಟದ ಫೆಡರೇಷನ್‌ಗಳು ಈ ನಿಟ್ಟಿನಲ್ಲಿ ಕಾರ್ಯಾಗಾರ ಮತ್ತಿತರ ಜಾಗೃತಿ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ರವಿಕುಮಾರ ಸುರಪುರ ಸೂಚಿಸಿದರು.
ಜಿ.ಪಂ.ಯೋಜನಾ ನಿರ್ದೇಶಕ ಬಿ.ಎಸ್.ಮೂಗನೂರಮಠ, ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಜಶೇಖರ ಮುನವಳ್ಳಿ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಡಾ.ಎನ್.ಆರ್.ಪುರುಷೋತ್ತಮ ಸೇರಿದಂತೆ ಸ್ಥಳೀಯ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
Kshetra Samachara
16/10/2021 02:47 pm