ಧಾರವಾಡ: ಅಖಿಲ ಭಾರತ ಶಿಕ್ಷಕರ ಫೆಡರೇಷನ್ ಕಾರ್ಯಾಧ್ಯಕ್ಷರಾಗಿ ಬಸವರಾಜ ಗುರಿಕಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಹಾರದ ಬೋದಗಯಾದಲ್ಲಿ ನಡೆದ ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಫೆಡರೇಷನ್ ಸಾಮಾನ್ಯ ಪರಿಷತ್ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಅಧ್ಯಕ್ಷರಾಗಿ ರಾಮಪಾಲ್‌ಸಿಂಗ್, ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಕಮಲಕಾಂತ ತ್ರಿಪಾಠಿ, ಕಾರ್ಯಾಧ್ಯಕ್ಷರಾಗಿ ಬಸವರಾಜ ಗುರಿಕಾರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಅಖಿಲ ಭಾರತ ಶಿಕ್ಷಕರ ಫೆಡರೇಷನ್ ದೇಶದಾದ್ಯಂತ 30 ಲಕ್ಷ ಶಿಕ್ಷಕರನ್ನು ಪ್ರತಿನಿಧಿಸುತ್ತಿದ್ದು, ಅಂತರರಾಷ್ಟ್ರೀಯ ಶಿಕ್ಷಕ ಸಂಘಟನೆಯ ಸಂಯೋಜನೆ ಹೊಂದಿದೆ.
Kshetra Samachara
16/11/2021 03:33 pm