ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಡಿಸಿ ಕಚೇರಿಯಲ್ಲಿ ಸಂತ ಶ್ರೇಷ್ಠ ಭಕ್ತ ಕನಕದಾಸ ಜಯಂತಿ ಆಚರಣೆ

ಧಾರವಾಡ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಿನ್ನೆ (ಸೋಮವಾರ) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಡಾ. ಸುಶೀಲಾ.ಬಿ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ನಮಿಸಿದರು.

ಈ ಸಂದರ್ಭದಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಮಾಧವ ಗಿತ್ತೆ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ರೇಖಾ ಡೊಳ್ಳಿನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಯಲ್ಲಮ್ಮ ಡಿ. ನಾಯ್ಕರ, ರಾಜೇಶ್ವರಿ ಸಾಲಗಟ್ಟಿ, ಮನಸೂರ ಗ್ರಾಮದ ಬಸವರಾಜ ದೇವರು, ನಾಗರಾಜ ಗುರಿಕಾರ, ದೇವರಾಜ ಕಂಬಳಿ, ಬಸವರಾಜ ಮಲಕಾರಿ, ಮಂಜುನಾಥ ನಡಟ್ಟಿ, ಎಲ್.ಕೆ.ಕೊಟಬಾಗಿ, ಸಾರ್ವಜನಿಕರು ಮತ್ತು ಕಂದಾಯ, ಸಾರ್ವಜನಿಕ ಶಿಕ್ಷಣ, ಪಂಚಾಯತ ರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

22/11/2021 11:05 pm

Cinque Terre

3.48 K

Cinque Terre

0

ಸಂಬಂಧಿತ ಸುದ್ದಿ