ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಳೆಯಿಂದ ಹಾನಿಗೀಡಾದ ಬೆಳೆ ವೀಕ್ಷಿಸಿದ ಡಿಸಿ ನಿತೇಶ್ ಪಾಟೀಲ

ಧಾರವಾಡ: ಕಳೆದ ಮೂರು ದಿನಗಳಿಂದ ಅಕಾಲಿಕವಾಗಿ ಸುರಿದ ಮಳೆಯಿಂದ ಧಾರವಾಡ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆಹಾನಿ, ಮನೆಗಳ ಕುಸಿತ, ರಸ್ತೆ, ಸೇರಿದಂತೆ ವಿವಿಧ ಮೂಲಸೌಕರ್ಯಗಳು ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಕುಂದಗೋಳ ತಾಲೂಕಿನ ಪಶುಪತಿಹಾಳ, ಸಂಶಿ, ಗುಡಗೇರಿ ಗ್ರಾಮಗಳಿಗೆ ನಿನ್ನೆ (ಸೋಮವಾರ) ಭೇಟಿ ನೀಡಿ ಮಳೆಯಿಂದ ಹಾನಿಗೀಡಾದ ಬೆಳೆಗಳನ್ನು ಪರಿಶೀಲಿಸಿ ಮಾತನಾಡಿದರು.

ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರು ದಿನ ಸುರಿದ ಮಳೆಯ ಪರಿಣಾಮ ನವೆಂಬರ್ 20 ವರೆಗಿನ ಜಂಟಿ ಸಮೀಕ್ಷೆ ಪ್ರಕಾರ ಅಂದಾಜು 21,344 ಹೆಕ್ಟೇರ್ ಕೃಷಿ ಬೆಳೆ ಮತ್ತು 8,759 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಈಗಾಗಲೇ ಕಂದಾಯ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜಂಟಿ ಸಮೀಕ್ಷೆ ಮಾಡುತ್ತಿದ್ದು, ಇಂದು ಮತ್ತು ನಾಳೆಯೂ ಬೆಳೆ ಹಾನಿ ಸಮೀಕ್ಷೆ ಮಾಡಲಿದ್ದಾರೆ.

ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಸುಮಾರು 68 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆಯಾಗಿತ್ತು. ಮತ್ತು ಅದು ಈಗ ಕಟಾವಿಗೆ ಬಂದಿತ್ತು. ಆದರೆ ಈ ಅಕಾಲಿಕ ಮಳೆಯಿಂದಾಗಿ ಹತ್ತಿ ಬೆಳೆ ಹೆಚ್ವು ಹಾನಿಯಾಗಿರುವ ಸಂಭವವಿದ್ದು, ಸರ್ವೆ ಕಾರ್ಯ ಕೈಗೊಳ್ಳಲಾಗಿದೆ.

ಸಂಶಿ ಗ್ರಾಮದ ಬೆಳೆ ಹಾನಿ ಜಮೀನಿಗೆ ಭೇಟಿ: ಕುಂದಗೋಳ ತಾಲೂಕಿನ ಪಶುಪತಿಹಾಳ ಗ್ರಾಮದ ಹತ್ತಿರ ಇರುವ ಸಂಶಿ ಗ್ರಾಮ ಹದ್ದೆಯ ರೈತ ಮಂಜುನಾಥ ಬಸವಂತಪ್ಪ ಗೊನಾಳ ಅವರ ಮಾಲಿಕತ್ವದ (ಸರ್ವೆ ನಂ:518/2) ಜಮೀನದಲ್ಲಿ ಬೆಳೆಯಲಾಗಿರುವ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ. ಜಿಲ್ಲಾಧಿಕಾರಿಗಳು ಸ್ವತಃ ಜಮೀನಿಗೆ ಭೇಟಿ ನೀಡಿ, ಗಿಡದಲ್ಲಿಯೇ ಕೊಳೆತ ಸ್ಥಿತಿಯಲ್ಲಿರುವ ಹಸಿ ಹಾಗೂ ಕೆಂಪು ಮೆಣಸಿನಕಾಯಿ ಬೆಳೆ ಹಾನಿ ಪರಿಶೀಲಿಸಿದರು.

ಬೆಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ ರೈತರ ಜಮೀನು ಬೆಳೆಗಳ ಜಂಟಿಸಮೀಕ್ಷೆ ಆರಂಭಿಸಲಾಗಿದ್ದು, ಹಾನಿಗೊಳಗಾದ ಬೆಳೆಗೆ ನಿಯಮಾನುಸಾರ ಪರಿಹಾರ ಒದಗಿಸಲಾಗುವುದು ಎಂದು ಅವರು ರೈತರಿಗೆ ತಿಳಿಸಿದರು.

Edited By : PublicNext Desk
Kshetra Samachara

Kshetra Samachara

22/11/2021 11:10 pm

Cinque Terre

20.15 K

Cinque Terre

1

ಸಂಬಂಧಿತ ಸುದ್ದಿ