ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: 72 ಗಂಟೆಯಲ್ಲಿ ಬೆಳೆಹಾನಿ ಮಾಹಿತಿ ನೀಡಲು ಸೂಚನೆ

ಧಾರವಾಡ: 2021ರ ಮುಂಗಾರು ಹಂಗಾಮಿನ ಬೆಳೆಗಳನ್ನು ಜಮೀನಿನಲ್ಲಿಯೇ ಕಟಾವಿನ ನಂತರ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಕಟಾವು ಮಾಡಿದ ಎರಡು ವಾರದೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ (2021 ರ ಮುಂಗಾರು ಹಂಗಾಮಿನ ಬೆಳೆ ವಿಮೆ ಯೋಜನೆಯಡಿ ನೊಂದಾಯಿಸಿಕೊಂಡ ರೈತರಿಗೆ ಮಾತ್ರ ಅನ್ವಯಿಸುವುದು) ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಇತ್ಯರ್ಥಪಡಿಸಲು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ.

ರೈತರು ಈ ಬಗ್ಗೆ ಸಂಬಂಧಪಟ್ಟ ವಿಮಾ ಸಂಸ್ಥೆಯ ಕಚೇರಿಗೆ ನೇರವಾಗಿ ತಕ್ಷಣ ಸೂಚನೆ ನೀಡಬೇಕು ಮತ್ತು ಯಾವುದೇ ಸಂದರ್ಭದಲ್ಲಿ ಬೆಳೆ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಗಳೊಳಗಾಗಿ ತಿಳಿಸ ತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ವಿಮಾ ಸಂಸ್ಥೆಯ ಪ್ರತಿನಿಧಿಗಳನ್ನಾಗಲಿ ಅಥವಾ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

22/11/2021 11:16 pm

Cinque Terre

8.88 K

Cinque Terre

0

ಸಂಬಂಧಿತ ಸುದ್ದಿ