ಧಾರವಾಡ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗಾಗಿ 30 ದಿನಗಳ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಟ್ರೈನಿಂಗ್ ಉಚಿತ ತರಬೇತಿಗಳನ್ನು ಜನವರಿ ತಿಂಗಳಲ್ಲಿ ಪ್ರಾರಂಭಿಸಲಾಗುವುದು.
ಅಭ್ಯರ್ಥಿಗಳು ಡಿ.25 ರ ಒಳಗಾಗಿ ತಮ್ಮ ಹೆಸರು ವಿಳಾಸಗಳನ್ನು ನೋಂದಾಯಿಸಲು ಕೊನೆಯ ದಿನಾಂಕವಾಗಿರುತ್ತದೆ. ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಭಿ ಜೀವನ ನಡೆಸಲು ಅನುಕೂಲವಾಗಲಿದೆ. ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.
ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ದೂರವಾಣಿ ಸಂಖ್ಯೆ 9483485489, 9482188780, 9743321062, 08284-295307, 220807 ಸಂಪರ್ಕಿಸಬಹುದೆಂದು ಸಂಸ್ಥೆಯು ಪ್ರಕಟಣೆ ತಿಳಿಸಿದೆ.
Kshetra Samachara
15/12/2021 10:16 pm