ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಪ್ರದಾನ

ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2021-22ನೇ ಸಾಲಿಗೆ ಮಾರ್ಚ್-8 ರಂದು ಮಹಿಳೆಯರ ಸರ್ವತೋಮುಖ ಅಭಿವೃದ್ದಿಗಾಗಿ ಶ್ರಮಿಸುತ್ತಿರುವ ಸಮಾಜದ ಮುಖ್ಯವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಮಹಿಳಾ ದಿನಾಚರಣೆ ಅಂಗವಾಗಿ ಧಾರವಾಡ ಜಿಲ್ಲೆಯಲ್ಲಿ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ವೀರಮಹಿಳೆ ಎಂದು ಗುರುತಿಸಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ.

ಅರ್ಹ ವ್ಯಕ್ತಿ ಹಾಗೂ ಸಂಸ್ಥೆಯವರು ಉಪ ನಿರ್ದೇಶಕರ ಕಚೇರಿ ಜಿಲ್ಲಾ ಬಾಲಭವನ ಕಟ್ಟಡ, ಈಜುಗೊಳದ ಎದುರು, ಡಿ.ಸಿ.ಕಂಪೌಂಡ, ಧಾರವಾಡ. (ದೂರವಾಣಿ ಸಂ:0836-2447850) ಇಲ್ಲಿಗೆ ಭೇಟಿ ನೀಡಿ ನಿಗದಿತ ಅರ್ಜಿ ಪಡೆದು ಜನವರಿ 15, 2022 ಸಂಜೆ 5-30 ಗಂಟೆಯೊಳಗೆ ಪ್ರಸ್ತಾವನೆ ಸಲ್ಲಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

17/12/2021 09:43 pm

Cinque Terre

7.2 K

Cinque Terre

1

ಸಂಬಂಧಿತ ಸುದ್ದಿ