ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಸ್ವಚ್ಛ ಸರ್ವೇಕ್ಷಣ 2021-22 ರ ಅಭಿಯಾನದಲ್ಲಿ ಭಾಗವಹಿಸುತ್ತಿದೆ.
ಪ್ರಸಕ್ತ ಸಾಲಿನ ಸ್ವಚ್ಛ ಸರ್ವೇಕ್ಷಣದಲ್ಲಿ ಸಾರ್ವಜನಿಕರು ಸಹ ಭಾಗವಹಿಸಲು ಅವಕಾಶ ಕಲ್ಪಿಸಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಉತ್ತಮ ಶ್ರೇಣಿ ಗಳಿಸಲು ಸಾರ್ವಜನಿಕರಿಗೆ ಹಲವಾರು ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿದೆ. ಇದರ ಅಂಗವಾಗಿ ಜಿಂಗಲ್ ಸ್ಪರ್ಧೆ, ಕಿರುಚಿತ್ರ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಬೀದಿನಾಟಕ ಸ್ಪರ್ಧೆ ಮತ್ತು ವಾಲ್ ಪೇಂಟಿಂಗ್ ಸ್ಪರ್ಧೆಗಳನ್ನು ಆಯೋಜಿಸಿದೆ.
ಅವಳಿ ನಗರದ ನಾಗರಿಕರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಸ್ಪರ್ಧೆಗೆ ಸ್ವಚ್ಛ ಸರ್ವೇಕ್ಷಣಾ 2022 ಅನ್ನು ವಿಷಯವನ್ನಾಗಿ ನೀಡಿದೆ. ಈ ಸ್ಪರ್ಧೆಗೆ ಎಲ್ಲಾ ವಯಸ್ಸಿನವರು ಭಾಗವಹಿಸಬಹುದು. ಸ್ಪರ್ಧಾಳುಗಳು https://forms.gle/NYG4EuogAtP51Drk7 ಲಿಂಕ್ ಬಳಸಿ ಸ್ಪರ್ಧೆಗಳಿಗೆ ನೋಂದಣಿ ಮಾಡಿಕೊಳ್ಳಬೇಕು. ಸ್ಪರ್ಧೆಯ ಎಲ್ಲ ಮಾಹಿತಿಯನ್ನು hdmcss2021@gmail.com ಗೆ ವಿವರಣೆಯೊಂದಿಗೆ ಕಳುಹಿಸಬೇಕು. ಹಾಗೂ ಸ್ಪರ್ಧೆಗಳ ಕುರಿತ ಸಿಡಿ ಅಥವಾ ಡಿವಿಡಿಯನ್ನು ಘನತ್ಯಾಜ್ಯ ವಸ್ತು ನಿರ್ವಹಣೆ ವಿಭಾಗ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಜನೇವರಿ 15, 2022 ರೊಳಗಾಗಿ ಸಲ್ಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸೂಕ್ತವಾದ ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಘನ ತ್ಯಾಜ್ಯ ವಸ್ತು ನಿರ್ವಹಣೆ ವಿಭಾಗ, ಹುಬ್ಬಳ್ಳಿ ಇಲ್ಲಿಗೆ ಸಂಪರ್ಕಿಸಲು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
22/12/2021 09:50 pm