ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಡಿ.27 ಕೊನೆಯ ದಿನ: ಡಿಸಿ

ಧಾರವಾಡ: ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರು ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ತಯಾರಿಸಲು ಸೂಚಿಸಿರುವಂತೆ ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಮತ್ತು 01.11.2021 ಕ್ಕೆ ಮೊದಲು ಆರು ವರ್ಷ ಅವಧಿಯಲ್ಲಿ ಕನಿಷ್ಠ ಒಟ್ಟು ಮೂರು ವರ್ಷಗಳಷ್ಟು, ದರ್ಜೆಯಲ್ಲಿ ಪ್ರಾಢಶಾಲೆಗಿಂತ ಕಡಿಮೆಯಲ್ಲದ ನಿರ್ಧಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಹಕ್ಕುಳ್ಳವರಾಗಿದ್ದಾರೆ ಎಂದು ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರಲು ಅರ್ಹತೆ ಇರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸುವ ಸಲುವಾಗಿ ಮತದಾರರ ನೋಂದಣಿ ನಿಯಮಗಳ ಪ್ರಕಾರ ನಮೂನೆ 19ನ್ನು ಭರ್ತಿ ಮಾಡಿ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಆಯುಕ್ತರು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಉಪವಿಭಾಗಾಧಿಕಾರಿಗಳು, ಉಪ ವಿಭಾಗ, ಧಾರವಾಡ, ಎಲ್ಲಾ ತಾಲ್ಲೂಕಿನ ತಹಶೀಲ್ದಾರರು ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಸಂಬಂಧಿಸಿದ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಅಥವಾ ನಿಯೋಜಿತ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಈ ರೀತಿ ನಿರ್ಧಿಷ್ಟಪಡಿಸಿದ ಶೈಕ್ಷಣಿಕ ಸಂಸ್ಥೆಗಳ ಪಟ್ಟಿಯು ಎಲ್ಲಾ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ನಿಯೋಜಿತ ಅಧಿಕಾರಿಗಳ ಬಳಿ ಲಭ್ಯವಿರುತ್ತದೆ.

ದಿನಾಂಕ 06.12.2021 ರಂದು ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ.

ದಿನಾಂಕ 27.12.2021ರೊಳಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಅರ್ಹ ಶಿಕ್ಷಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ದಾಖಲಾಗಿರುವ ಬಗ್ಗೆ ಪರಿಶೀಲಿಸಿಕೊಂಡು ಸರಿಯಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು ಹಾಗೂ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಾಗದೆ ಇದ್ದಲ್ಲಿ ನಮೂನೆ 19ರಲ್ಲಿ ಅರ್ಜಿ ಭರ್ತಿಮಾಡಿ ತಾವೂ ಸಾಮಾನ್ಯ ನಿವಾಸಿಯಾಗಿರುವ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಅಥವಾ ನಿಯೋಜಿತ ಅಧಿಕಾರಿಗಳಿಗೆ ದಿನಾಂಕ 27.12.2021ರೊಳಗೆ ಸಲ್ಲಿಸಬೇಕೆಂದು ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

23/12/2021 10:01 pm

Cinque Terre

9.84 K

Cinque Terre

1

ಸಂಬಂಧಿತ ಸುದ್ದಿ