ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದ ಕವಿವ ಸಂಘಕ್ಕೆ ಡಾ.ಜಯದೇವಿ ತಾಯಿ ಲಿಗಾಡೆ ಪ್ರಶಸ್ತಿ

ಧಾರವಾಡ: ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ವಿಶಿಷ್ಟ ಪಾತ್ರ ವಹಿಸಿದ್ದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕೊಡಮಾಡುವ ಡಾ.ಜಯದೇವಿ ತಾಯಿ ಲಿಗಾಡೆ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಪ್ರಸಕ್ತ 2021-22ರ ಸಾಲಿನಿಂದ ಪ್ರಥಮ ಬಾರಿಗೆ ಡಾ.ಕಯ್ಯಾರ ಕಿಂಞಣ್ಣ ರೈ ಹಾಗೂ ಡಾ.ಜಯದೇವಿ ತಾಯಿ ಲಿಗಾಡೆ ಅವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಲು ಪ್ರಾರಂಭಿಸಿದೆ.

ಪ್ರಶಸ್ತಿಗೆ ಆಯ್ಕೆ ಸಮಿತಿ ರಚಿಸಲಾಗಿತ್ತು. ಸಮಿತಿ ನೀಡಿದ ಪಟ್ಟಿ ಪ್ರಕಾರ ಇದೀಗ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಕಯ್ಯಾರ ಕಿಂಞಣ್ಣ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರಶಸ್ತಿಯನ್ನು ವಿಶ್ರಾಂತ ಮುಖ್ಯೋಪಾಧ್ಯಾಯರಾಗಿರುವ ಮತ್ತು ಕಣ್ಣೂರು ವಿಶ್ವವಿದ್ಯಾನಿಲಯದ ಸಂದರ್ಶಕ ಉಪನ್ಯಾಸಕರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿದ ಕನ್ನಡಪರ ಹೋರಾಟಗಾರ ಬಿ.ಪುರುಷೋತ್ತಮ ಅವರಿಗೆ ಹಾಗೂ ಡಾ.ಜಯದೇವಿ ತಾಯಿ ಲಿಗಾಡೆ ಹೆಸರಿನಲ್ಲಿ ಸ್ಥಾಪಿಸಲಾಗಿರುವ ಪ್ರಶಸ್ತಿಯನ್ನು ಕರ್ನಾಟಕ ಏಕೀಕರಣದಲ್ಲಿ ವಿಶಿಷ್ಟ ಪಾತ್ರ ವಹಿಸಿದ ಕನ್ನಡ ನಾಡು, ನುಡಿ ಬಗ್ಗೆ ಅಪಾರ ಸೇವೆ ಸಲ್ಲಿಸುತ್ತ ಬಂದಿರುವ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ನೀಡಲಾಗಿದೆ.

ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು ಬಹುಮಾನ ಒಳಗೊಂಡಿದೆ.

Edited By : PublicNext Desk
Kshetra Samachara

Kshetra Samachara

29/12/2021 09:45 pm

Cinque Terre

14.77 K

Cinque Terre

0

ಸಂಬಂಧಿತ ಸುದ್ದಿ