ಧಾರವಾಡ: ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಜನೇವರಿ 01, 2022 ರಂದು ಮುಂಜಾನೆ 11 ಗಂಟೆಗೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಜಯಂತಿ ಕಾರ್ಯಕ್ರಮವನ್ನು ಕೋವಿಡ್-19ರ ಕಾರಣ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಜಕಣಾಚಾರಿಗಳ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಹಾಗೂ ಪೂಜಾ ಕಾರ್ಯಕ್ರಮ ನೆರವೇರಿಸಲಾಗುವುದು. ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಮಾಜ ಮುಖಂಡರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
29/12/2021 09:54 pm