ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಡಿ.ಸಿ ಕಚೇರಿಯಲ್ಲಿ ವಿಶ್ವಮಾನವ ದಿನ ಆಚರಣೆ

ಧಾರವಾಡ: ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಇಂದು ಕುವೆಂಪು ಅವರ ಜನ್ಮ ದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಯೊಂದಿಗೆ ಪೂಜೆ ಸಲ್ಲಿಸಿದರು. ಕಾರ್ಯಕ್ರಮವನ್ನು ಕೋವಿಡ್-19ರ ಕಾರಣ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ. ಬಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಎಫ್. ಸಿದ್ಧನಗೌಡ್ರ, ಪ್ರಧಾನ ಕಾರ್ಯದರ್ಶಿ ಎಸ್. ಬಿ.ಸುಬ್ಬಾಪೂರಮಠ, ಬೇಂದ್ರೆ ಟ್ರಸ್ಟ್ ಅಧ್ಯಕ್ಷರು ಡಾ. ಡಿ.ಎಂ.ಹಿರೇಮಠ ಹಾಗೂ ಕೆ.ಎಚ್.ನಾಯಕ, ಬಾಳಣ್ಣ ಶೀಗಿಹಳ್ಳಿ, ಶಂಕರ ಕುಂಬಿ ಸೇರಿದಂತೆ ಇತರ ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Edited By : PublicNext Desk
Kshetra Samachara

Kshetra Samachara

29/12/2021 10:06 pm

Cinque Terre

11.83 K

Cinque Terre

0

ಸಂಬಂಧಿತ ಸುದ್ದಿ