ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ

ಧಾರವಾಡ: ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಯೊಂದಿಗೆ ಪೂಜೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಮುಖಂಡರಾದ ವಸಂತ ಅರ್ಕಾಚಾರ್, ಎಂ.ಬಿ. ಬಡಿಗೇರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Edited By : PublicNext Desk
Kshetra Samachara

Kshetra Samachara

01/01/2022 06:25 pm

Cinque Terre

10.42 K

Cinque Terre

0

ಸಂಬಂಧಿತ ಸುದ್ದಿ