ಧಾರವಾಡ: ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ ಉದ್ಘಾಟನಾ ಸಮಾರಂಭ ಫೆಬ್ರವರಿ 7 ರಂದು ಬೆಳಿಗ್ಗೆ 11-30 ಕ್ಕೆ ಕರ್ನಾಟಕ ವಿಶ್ವವಿದ್ಯಾಲಯದ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ಉಪಸ್ಥಿತಿಯಲ್ಲಿ, ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ ಉದ್ಘಾಟಿಸುವರು.
ವಿಶೇಷ ಅತಿಥಿಗಳಾಗಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಪಾಲ್ಗೊಳ್ಳುವರು.
ಹುಬ್ಬಳ್ಳಿ ಧಾರವಾಡ ಪಶ್ಚಿಮ ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ-ಮಂಡಳಿಗಳ ಅಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.
Kshetra Samachara
05/02/2022 09:44 pm