ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಫೆ.20 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ವಿಶೇಷ ಮಹಾಸಭೆ

ಧಾರವಾಡ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ತನ್ನ 2012ರ ಉಪವಿಧಿಗಳನ್ನು ತಿದ್ದುಪಡಿ ಮಾಡಲು ಉದ್ದೇಶಿಸಿದ್ದು, ಬೆಂಗಳೂರಿನ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ದಿನಾಂಕ: 20-12-2021 ರಲ್ಲಿ ನೀಡಿರುವ ಸೂಚನೆಯಂತೆ ಸಂಘದ ಸರ್ವ ಸದಸ್ಯರ ವಾಸ್ತವ ಮತ್ತು ವರ್ಚುಯಲ್ ವಿಧಾನದ ಮೂಲಕ ವಿಶೇಷ ಮಹಾಸಭೆಯನ್ನು ಫೆಬ್ರವರಿ 20, 2022 ರ ಭಾನುವಾರ, ಬೆಳಿಗ್ಗೆ 11 ಗಂಟೆಗೆ ವರ್ಚುಯಲ್ ವೇದಿಕೆಯ ಮೂಲಕ ಜರುಗಲಿದ್ದು ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಬೇಕೆಂದು ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಶಿವಮೊಗ್ಗ ನಗರದ ಸಾಗರ ರಸ್ತೆ ಆಟೋ ಕಾಂಪ್ಲೆಕ್ಸ್‍ನಲ್ಲಿರುವ ದ್ವಾರಕ ಕನ್ವೆನ್ಸನ್ ಹಾಲ್‌ನಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಇವರ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯರ ಮಹಾಸಭೆಯನ್ನು ಆಯೋಜಿಸಲಾಗಿದ್ದು, ಸಂಘದ ಸಮಸ್ತ ಸದಸ್ಯರು ಈ ವಿಶೇಷ ಮಹಾಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ, ಸೂಚನೆಗಳನ್ನು ನೀಡಿ, ಸಭೆಯನ್ನು ಯಶಸ್ವಿಗೊಳಿಸಿ ಕೊಡುವಂತೆ ಸಂಘದ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಉದ್ದೇಶಿತ ತಿದ್ದುಪಡಿ ಉಪವಿಧಿಗಳ ಸಂಪೂರ್ಣ ವಿವರಗಳನ್ನು ನೋಟೀಸ್‍ನೊಂದಿಗೆ ಸದಸ್ಯರ ಮೊಬೈಲ್ ಸಂಖ್ಯೆಗೆ ಪಿಡಿಎಫ್ ಸಾಪ್ಟ್ ಕಾಪಿ (pdf-soft copy) ಯನ್ನು ಸಮೂಹ ವಾಟ್ಸಪ್ (whatsapp) ಸಂಖ್ಯೆಗಳ ಮೂಲಕ ಈಗಾಗಲೇ ಕಳುಹಿಸಲಾಗಿದೆ. ಹೆಚ್ಚುವರಿಯಾಗಿ ಕೇಂದ್ರ ಸಂಘದ ಜಾಲತಾಣ, ಸಂಘದ ಕೇಂದ್ರ ಕಚೇರಿ ಕಾರ್ಯಾಲಯ, ಎಲ್ಲಾ ಜಿಲ್ಲಾ ಹಾಗೂ ತಾಲೂಕು ಸಂಘಗಳ ಕಚೇರಿಗಳಲ್ಲಿ ಲಭ್ಯವಿದ್ದು, ಸದಸ್ಯರು ಮುಕ್ತವಾಗಿ ಪಡೆದುಕೊಳ್ಳಬಹುದಾಗಿದೆ ಎಂದವರು ತಿಳಿಸಿದ್ದಾರೆ.

ವರ್ಚುಯಲ್ ವೇದಿಕೆಯ ಮೂಲಕ ಸದಸ್ಯರಿಗೆ ಸಭೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದ್ದು, https://us02web.zoom.us/81805162152 ಲಿಂಕ್ ಅನ್ನು ಬಳಸಿ ಸಭೆಯಲ್ಲಿ ಭಾಗವಹಿಸಬಹುದಾಗಿದೆ. ಈ ವಿಶೇಷ ಮಹಾಸಭೆಯನ್ನು ಸಂಘದ ಫೇಸ್‍ಬುಕ್ ಲಿಂಕ್:https://www.facebook.com/ksgeaofficial/ ಹಾಗೂ https://www.facebook.com/ksgeabng/ ನಲ್ಲಿಯೂ ಸಹ ವೀಕ್ಷಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಂಘದ ಸದಸ್ಯರು ಹೆಚ್ಚಿನ ಮಾಹಿತಿಗಾಗಿ ಮ್ಯಾನೇಜರ್ ಸುರೇಶ್ ಅವರನ್ನು ಮೊಬೈಲ್ ಸಂಖ್ಯೆ: 9448617400 ರ ಮೂಲಕ ಮತ್ತು ದೂರವಾಣಿ 080-22354784, 080-22354783 ನ್ನು ಸಂಪರ್ಕಿಸಬಹುದಾಗಿದೆ ಎಂದು ಧಾರವಾಡ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

05/02/2022 09:49 pm

Cinque Terre

11.27 K

Cinque Terre

0

ಸಂಬಂಧಿತ ಸುದ್ದಿ