ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಕುರುಬರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ, ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಫೌಂಡೇಶನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕಲಘಟಗಿ ತಾಲೂಕಿನ ಜಿನ್ನೂರಿನ ಕುರುಬ ಸಮಾಜದ ಚನ್ನಬಸಪ್ಪ ತಿಪ್ಪಣ್ಣ ಕೃಷ್ಣಮ್ಮನವರ ಆಸ್ತಿ ವಿವಾದ ಆಗಿದೆ. ಮೊನ್ನೆ ಮುಗದ ಗ್ರಾಮದ ಕೆರೆಯ ವಿಠ್ಠಲ ಹೊಸಮನಿ ಹಾಗೂ ಉಮೇಶ ಕಳ್ಳಿಮನಿ ಅವರು ಮುಳುಗಿ ಸಾವನ್ನಪ್ಪಿದ್ದಾರೆ ಆ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಸಮಾಜದ ಮಾಹಿತಿ ಹಕ್ಕು ಹೋರಾಟಗಾರರ ಮೇಲೆ ನಿರಂತರ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿದ್ದು, ಪೊಲೀಸ್ ಇಲಾಖೆ ಅಮಾಯಕರನ್ನು ರಕ್ಷಿಸದೇ ಭ್ರಷ್ಟರನ್ನು ರಕ್ಷಣೆ ಮಾಡಲು ಮುಂದಾಗಿದೆ. ಭ್ರಷ್ಟರಿಗೆ ಪೊಲೀಸರು ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೂಡಲೇ ತಪ್ಪಿತಸ್ಥರ ವಿರುದ್ಧ ತನಿಖೆ ನಡಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿಗಳ ಮುಖ್ಯಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
Kshetra Samachara
09/02/2022 09:45 pm