ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಣವಿ ಅವರ ಆರೋಗ್ಯ ವಿಚಾರಿಸಿದ ಎಚ್.ಕೆ.ಪಾಟೀಲ

ಧಾರವಾಡ: ಮಾಜಿ ಸಚಿವ ಎಚ್.ಕೆ.ಪಾಟೀಲ ಅವರು ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರು ಚಿಕಿತ್ಸೆ ಪಡೆಯುತ್ತಿರುವ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಕಣವಿ ಅವರ ಆರೋಗ್ಯ ವಿಚಾರಿಸಿದರು.

ನಂತರ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ನಾಡಿನ ಹಿರಿಯ ಕವಿ ಚೆನ್ನವೀರ ಕಣವಿ ಅವರು ಇದೀಗ ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯ ವೈದ್ಯರು ಕಣವಿಯವರ ಆರೋಗ್ಯದ ಬಗ್ಗೆ ಸಂಪೂರ್ಣ ನಿಗಾ ವಹಿಸಿದ್ದಾರೆ. ಹೀಗಾಗಿ ಅವರು ಶೀಘ್ರ ಗುಣಮುಖರಾಗುವ ವಿಶ್ವಾಸವಿದೆ. ಕಣವಿ ಅವರು ಆದಷ್ಟು ಬೇಗ‌ ಚೇತರಿಸಿಕೊಂಡು ಸಾರಸ್ವತ ಲೋಕದಲ್ಲಿ‌ ಇನ್ಮಷ್ಟು ಕಾರ್ಯ ಮಾಡಬೇಕಿದೆ. ನಾಡಿನ ಸಮಸ್ತ ಕನ್ನಡಿಗರ ಆಶಯದಂತೆ ಅವರು ಎಂದಿನಂತೆ ಆಗಲಿದ್ದಾರೆ ಎಂದು ಪಾಟೀಲ ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಹಿರಿಯ ವೈದ್ಯರು ಕಣವಿ ಅವರಿಗೆ ನೀಡುತ್ತಿರುವ ಚಿಕಿತ್ಸೆಯ ವಿವರ ನೀಡಿದರು.

Edited By : PublicNext Desk
Kshetra Samachara

Kshetra Samachara

13/02/2022 12:12 am

Cinque Terre

2.89 K

Cinque Terre

0

ಸಂಬಂಧಿತ ಸುದ್ದಿ