ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಯಾದವಾಡದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಅಮೃತ ಚಾಲನೆ

ಧಾರವಾಡ: ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಬರುವ ಯಾದವಾಡ ಗ್ರಾಮದಲ್ಲಿ ಅಂದಾಜು 1.7 ಕೋಟಿ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿಯವರು ಭಾನುವಾರ ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಶಾಸಕ ಅಮೃತ ದೇಸಾಯಿ ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹಲವಾರು ಕಾಮಗಾರಿಗಳು ನಡೆಯುತ್ತಿದ್ದು, ಉತ್ತಮ ಗುಣಮಟ್ಟ ಕಾಪಾಡುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

2021-22ನೇ ಸಾಲಿನ ಎಸ್.ಸಿ.ಪಿ, ಎಸ್.ಐ.ಪಿ ಯೋಜನೆಯಡಿ ಅಂದಾಜು 20 ಲಕ್ಷ ರೂಪಾಯಿ ಅನುದಾನದಲ್ಲಿ ಯಾದವಾಡ ಗ್ರಾಮದ ಎಸ್ ಟಿ ಕಾಲೊನಿಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಮೊದಲು ಚಾಲನೆ ನೀಡಿದರು.

2021-22 ನೇ ಸಾಲಿನ 50-54 ಅಡಿ ಅಂದಾಜು 51 ಲಕ್ಷ ರೂಪಾಯಿ ಅನುದಾನದಲ್ಲಿ ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ಬೆಟಗೇರಿ ರಸ್ತೆಯಲ್ಲಿ ಬಸಯ್ಯ ಸಾಲಿ ಇವರ ಹೊಲದಿಂದ ಶಂಕರ ಬೆಟಗೇರಿಯವರ ಹೊಲದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಜಿಲ್ಲಾ ಪಂಚಾಯತಿ ಅಂದಾಜು 99 ಲಕ್ಷ ರೂಪಾಯಿ ಅನುದಾನದಲ್ಲಿ ಧಾರವಾಡ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಯಾದವಾಡ ಗ್ರಾಮದ ಮನೆ ಮನೆಗೆ ಗಂಗೆ ಕಾಮಗಾರಿಗೆ ಚಾಲನೆ ನೀಡಿದವರು.

Edited By : PublicNext Desk
Kshetra Samachara

Kshetra Samachara

14/02/2022 01:26 pm

Cinque Terre

4.76 K

Cinque Terre

0

ಸಂಬಂಧಿತ ಸುದ್ದಿ