ಹುಬ್ಬಳ್ಳಿ: ಸದನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಶಾಸಕ ಮಿತ್ರರು ಸಚಿವ ಕೆ.ಎಸ್.ಈಶ್ವರಪ್ಪನವರ ಮೇಲೆ ಹಲ್ಲೇ ಮಾಡಲು ಯತ್ನಿಸಿದ್ದು ಅತ್ಯಂತ ಖಂಡನೀಯ. ಈ ಘಟನೆ ಸಂಬಂಧವಾಗಿ ಸರಕಾರ ಡಿ.ಕೆ.ಶಿವಕುಮಾರ್ ಅವರ ಮೇಲೆ ಗುಂಡಾ ಕಾಯ್ದೆ ಹಾಕಿ ಕಾನೂನುಕ್ರಮ ಜರುಗಿಸಬೇಕೆಂದು ಮಾಜಿ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ ಒತ್ತಾಯಿಸಿದರು.
ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್.ಈಶ್ವರಪ್ಪನವರ ವಿರುದ್ಧ ಕಾಂಗ್ರೆಸ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕುವುದು, ಧರಣಿ ಸತ್ಯಾಗ್ರಹ ಮಾಡುತ್ತಿರುವುದು ನಾಟಕೀಯ ಬೆಳವಣಿಗೆ ಆಗಿದೆ. ಹಾಗಾಗಿ ಕೂಡಲೇ ಹೋರಾಟ ಕೈಬಿಡಬೇಕು ಎಂದರು.
ಈ ಹಿಂದೆ ರಾಷ್ಟ್ರಧ್ವಜದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸ್ವಾತಂತ್ರ್ಯ ನಂತರ ರಾಷ್ಟ್ರಧ್ವಜಕ್ಕೆ ಅಪಮಾನ ಆದಾಗ ಪ್ರತಿಭಟನೆ ಮಾಡಲಿಲ್ಲ. ವಂದೆ ಮಾತರಂ ಹೇಳಲಿಲ್ಲ. ಇದೀಗ ವಂದೆ ಮಾತರಂ ಹೇಳುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿಸಿದಂತಾಗುತ್ತದೆ. ಹಾಗಾಗಿ ಕಾಂಗ್ರೆಸ್ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಹೇಳುವುದನ್ನು ಬಿಡಬೇಕು. ಇಲ್ಲವಾದರೇ ಸಂಗೊಳ್ಳಿ ರಾಯಣ್ಣ ಹಾಗೂ ಕನಕದಾಸರ ಸಂಘಟನೆಗಳ ಮೂಲಕ ಕಾಂಗ್ರೆಸ್ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Kshetra Samachara
19/02/2022 04:43 pm